ನವದೆಹಲಿ : ದೇಶಾದ್ಯಂತ ಹೆಮ್ಮಾರಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 15,968 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಒಂದೇ ದಿನ 465 ಮಂದಿವನ್ನು ಕೊರೊನಾ ಸೋಂಕು ಬಲಿಪಡೆದುಕೊಂಡಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ಕಳೆದ 24ಗಂಟೆಯಲ್ಲಿ 15,968 ಮಂದಿಗೆ ಸೋಂಕು ತಗುಲಿದ್ದು, 465 ಮಂದಿ ಮೃತಪಟ್ಟಿದ್ದಾರೆ. ಈ ಅವಧಿಯಲ್ಲಿ 10,495 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4,56,183ಕ್ಕೆ ಏರಿಕೆಯಾಗಿದ್ದು, ಇದುವರೆಗೆ 14,476 ಮಂದಿ ಮೃತಪಟ್ಟಿದ್ದಾರೆ. 2,58,684 ಮಂದಿ ಇಲ್ಲಿವರೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,83,022 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ.