ಬೆಂಗಳೂರು: ಲಾಕ್ಡೌನ್ ನಡುವೆಯೂ ರಾಜ್ಯ ಹಾಗೂ ಬೆಂಗಳೂರು ನಗರದಲ್ಲಿ ಮಹಾಮಾರಿ ಕೊರೊನಾ ರುದ್ರನರ್ತನ ಮುಂದುವರೆದಿದೆ. ಇಂದು ಒಂದೇ ದಿನ 3176 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇಡೀ ರಾಜ್ಯದ ಜನತೆಯ ಜಂಘಾ ಬಲವೇ ಉಡುಗಿ ಹೋಗುವಂತೆ ಮಾಡಿದೆ.
ಶಿವಮೊಗ್ಗದಲ್ಲಿ ಸ್ವಾಮೀಜಿಯೊಬ್ಬರು ಸೇರಿದಂತೆ ಇದೇ ಮೊದಲ ಬಾರಿಗೆ ಕೊರೊನಾಗೆ ಬರೋಬ್ಬರಿ 87 ಮಂದಿ ಬಲಿಯಾಗಿರುವುದು ಮತ್ತಷ್ಟು ಆತಂಕ ಮೂಡಿಸಿದೆ.
ಇದೇ ಮೊದಲ ಬಾರಿಗೆ ಕೊರೊನಾಗೆ ಮಠಾಧೀಶರೊಬ್ಬರು ಬಲಿಯಾಗಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ರಾಂಪುರ ಶಾಖಾ ಮಠದ 54 ವರ್ಷದ ಹಾಲಸ್ವಾಮಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳುತ್ತಿದ್ದ ಸ್ವಾಮೀಜಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸ್ಫೋಟವಾಗಿದ್ದು, ಇಂದು ಬರೋಬ್ಬರಿ 1975 ಮಂದಿಗೆ ಪಾಸಿಟಿವ್ ಬಂದಿದೆ. ಇಂದು 60 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಕೊರೊನಾ ಮರಣ ಪ್ರಮಾಣ ಶೇ.1.80ರಷ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47, 253ಕ್ಕೆ ಏರಿಕೆಯಾಗಿದ್ದು, ಒಟ್ಟು ಮೃತರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಸಕ್ರಿಯ ಕೊರೊನಾ ಪ್ರಕರಣ ಸಂಖ್ಯೆ 15,600ಯಾಗಿದ್ದರೆ, ಇಂದು 463ಮಂದಿ ಚಿಕಿತ್ಸೆ ಪಡೆದು ಡಿಶ್ಚಾರ್ಜ್ ಆಗಿದ್ದಾರೆ.
ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು
ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...








