ಮೈಸೂರು: ಮಹಾಮಾರಿ ಕೊರೊನಾ ವೈರಸ್ ಮೈಸೂರು ನಗರ ಸೇರಿದಂತೆ ಮೈಸೂರು ಜಿಲ್ಲೆಯ ಪೊಲೀಸರ ನಿದ್ದೆಗೆಡಿಸಿದೆ.
ಮೈಸೂರು ನಗರದ ಶಿವರಾಂ ಪೇಟೆಯಲ್ಲಿರುವ ದೇವರಾಜ ಟ್ರಾಫಿಕ್ ಎಸಿಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಮುಖ್ಯಪೇದೆಗೆ ಕೊರೋನಾ ಪಾಸಿಟೀವ್ ಬಂದ ಹಿನ್ನೆಲೆಯಲ್ಲಿ ಟ್ರಾಫಿಕ್ ಎಸಿಪಿ ಕಚೇರಿ ಸೀಲ್‍ಡೌನ್ ಮಾಡಲಾಗಿದೆ.
ಟ್ರಾಫಿಕ್ ಎಸಿಪಿ ಸೇರಿ ನಾಲ್ವರು ಪೆÇಲೀಸರು ಹಾಗೂ ಇಬ್ಬರು ಹೋಮ್‍ಗಾರ್ಡ್‍ಗೆ ಕ್ವಾರಂಟೈನ್ ಮಾಡಲಾಗಿದೆ.

ಸರ್ಕಲ್ ಇನ್ಸ್ಪೆಕ್ಟರ್ಗೆ ಕೊರೊನಾ..!
ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ಪಟ್ಟಣ ಪೆÇಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಲ್ ಇನ್ಸ್ಪೆಕ್ಟರ್ಗೆ
ಕೊರೊನಾ ಸೋಂಕು ದೃಢಪಟ್ಟಿದೆ. ಅವರಿಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸರ್ಕಲ್ ಇನ್ಸ್‍ಪೆಕ್ಟರ್ ಸಂಪರ್ಕದಲ್ಲಿದ್ದ ಠಾಣೆಯ ಸಿಬ್ಬಂದಿಗಳಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ. ಜತೆಗೆ ಹೆಚ್.ಡಿ ಕೋಟೆ ಪೆÇಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.








