ಬೆಂಗಳೂರು: ಕೊರೊನಾಗೆ ಸೋಂಕಿನಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಡಿಶ್ಚಾರ್ಜ್ ಆಗಬೇಕಿದ್ದ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಗರದ ಮರಿಯಪ್ಪನ ಪಾಳ್ಯದ ನಿವಾಸಿಯಾಗಿರುವ 60 ವರ್ಷದ ವೃದ್ಧೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಜುಲೈ.1ರಂದು ಅವರನ್ನು ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆದರೆ, ವೃದ್ಧೆಯ ಆರೋಗ್ಯದಲ್ಲಿ ಚೇತರಿಕೆ ಲಕ್ಷಣಗಳು ಕಂಡು ಬಂದಿದ್ದವು. ಹೀಗಾಗಿ ಇಂದು ಬೆಳಿಗ್ಗೆ ಅಥವಾ ಸಂಜೆ ಹೊತ್ತಿಗೆ ವೃದ್ಧೆಯನ್ನು ಡಿಶ್ಚಾರ್ಜ್ ಮಾಡಿ ಮನೆಗೆ ಕಳಿಸಲು ವೈದ್ಯರು ಚಿಂತನೆ ನಡೆಸಿದ್ದರು. ನಿನ್ನೆ ವೃದ್ಧೆಯ ಆರೋಗ್ಯ ಪರೀಕ್ಷೆ ನಡೆಸಿದ್ದ ವೈದ್ಯರಿಗೆ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂಬುದು ಖಚಿತವಾಗಿತ್ತು. ಅಷ್ಟರೊಳಗೆ ಕಳೆದ ರಾತ್ರಿ ವೃದ್ಧೆ ಆಸ್ಪತ್ರೆಯ ಕಾರಿಡಾರ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಕೊರೊನಾದಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡವರಲ್ಲಿ ಇದು ಐದನೇ ಪ್ರಕರಣವಾಗಿದೆ.
ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ
ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...








