ನವದೆಹಲಿ : ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಕಳೆದ 24 ಗಂಟೇಲಿ 28,637 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 551 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದ್ದು, 22,674 ಸಾವು ಸಂಭವಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಶನಿವಾರ ಬೆಳಿಗ್ಗೆಯಿಂದ ಭಾನುವಾರ ಬೆಳಗಿನ ನಡುವನ ಅವಧಿಯಲ್ಲಿ ಹೊಸದಾಗಿ 28,637 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ. ಈವರೆಗೆ 22,674 ಸಾವು ಸಂಭವಿಸಿದ್ದು, 5,34,621 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2,92,258 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,46,600 ತಲುಪಿದೆ. ಸಾವಿನ ಸಂಖ್ಯೆ 10,116ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ಈವರೆಗೆ 1,34,226 ಜನರಿಗೆ ಸೋಂಕು ತಗುಲಿದ್ದು, 1,898 ಮಂದಿ ಸಾವಿಗೀಡಾಗಿದ್ದಾರೆ. ದೆಹಲಿಯಲ್ಲಿ ಈವರೆಗೆ 1,10,921 ಪ್ರಕರಣಗಳು ಪತ್ತೆಯಾಗಿದ್ದು, 3,334 ಮಂದಿ ಮೃತಪಟ್ಟಿದ್ದಾರೆ.








