ಜಗತ್ತಿನಾದ್ಯಂತ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಶಾಲೆಗಳಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಅಥವಾ ವಿದ್ಯಾರ್ಥಿಗಳು ಶೀತ, ಜ್ವರ ಅಥವಾ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರೆ, ಅವರಿಗೆ ಕಡ್ಡಾಯವಾಗಿ ರಜೆ ನೀಡುವಂತೆ ಶಾಲಾ ಆಡಳಿತ ಮಂಡಳಿಗೆ ಆದೇಶಿಸಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ವೈದ್ಯರಿಂದ ಕಾಯಿಲೆ ಗುಣಮುಖವಾಗಿರುವುದನ್ನು ಖಚಿತ ಪಡಿಸಿಕೊಂಡ ನಂತರವಷ್ಟೇ ಶಾಲೆಗೆ ಬರಲು ತಿಳಿಸಿದೆ. ವಿದ್ಯಾರ್ಥಿಗಳಿಗೆ ರೋಗ ಲಕ್ಷಣ ಕಾಣಿಸಿಕೊಂಡ ತಕ್ಷಣವೇ ಮನೆಗೆ ಕಳುಹಿಸಲು ಇಲಾಖೆ ನಿರ್ದೇಶಿಸಿದೆ. ವಿದ್ಯಾರ್ಥಿ ನಿಲಯದಲ್ಲಿ ರೋಗ ಲಕ್ಷಣಗಳು ಕಾಣಿಸಿದಲ್ಲಿ, ಆ ವಿದ್ಯಾರ್ಥಿಯನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡುವಂತೆಯೂ, ಚೀನಾದಿಂದ ಬಂದವರಿದ್ದರೆ ಅವರ ಮೇಲೆ ನಿಗಾ ಇಡುವಂತೆಯೂ ಸೂಚಿಸಿದೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








