ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೋನಾ ಸೋಂಕು
ಹೊಸದಿಲ್ಲಿ, ಸೆಪ್ಟೆಂಬರ್16: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.ಕೊರೋನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಿನ್ನೆ, ನನ್ನ ಆರೋಗ್ಯದಲ್ಲಿ ಏರುಪೇರು ಉಂಟಾಯಿತು ಮತ್ತು ನನ್ನ ವೈದ್ಯರನ್ನು ಸಂಪರ್ಕಿಸಿದೆ. ವೈದ್ಯರ ಪರಿಶೀಲನೆಯ ಸಮಯದಲ್ಲಿ, ನನಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದೆ. ನಾನು ಪ್ರಸ್ತುತ ಎಲ್ಲರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ಕ್ವಾರಂಟೈನ್ ಗೆ ಒಳಗಾಗಿದ್ದೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.
https://twitter.com/nitin_gadkari/status/1306262137346514950?s=19