ಕೊರೊನಾ ಎಂಬ ಮಹಾಮಾರಿ ವಿಶ್ವದ ಉದ್ದಗಲಕ್ಕೂ ತನ್ನ ಕದಂಬ ಬಾಹುಗಳನ್ನು ಚಾಚುತ್ತಿದೆ. ಭಾರತ ದೇಶದಲ್ಲಿ ಮೂರು ಜನರನ್ನು ಕೊರೊನಾ ಬಲಿ ಪಡೆದಿದೆ. ಸರ್ಕಾರ ಅನೇಕ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಕೇಂದ ಸಚಿವ ಮುರುಳೀಧರನ್ ಅವರಿಗೂ ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಅದಕ್ಕಾಗಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಅವರ ದೆಹಲಿಯ ಮನೆಯಲ್ಲೇ ಸಚಿವರು ಸ್ವಯಂ ಪ್ರೇರಿತವಾಗಿ ದಿಗ್ಬಂಧನಕ್ಕೆ ಒಳಗಾಗಿ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾರ್ಚ್ ೧೪ರಂದು ಕೇರಳದ ತಿರುವನಂತಪುರAನಲ್ಲಿ ಸಭೆಯೊಂದು ನಡೆದಿತ್ತು. ಸಭೆಯಲ್ಲಿ ಸಚಿವರು ಭಾಗಿಯಾಗಿದ್ದರು. ಸಭೆಯಲ್ಲಿ ಕೊರೊನಾ ಸೋಂಕು ಪೀಡಿತ ವೈದ್ಯರೊಂದಿಗೆ ಸಂಪರ್ಕ ಹೊಂದಿದ್ದರು. ಈ ಹಿನ್ನಲೆಯಲ್ಲಿ ಅವರಿಗೂ ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಇದರಿಂದಾಗಿ ಕೇಂದ್ರ ಸಚಿವ ಮುರಳೀಧರನ್ ಮೇಲೆ ಮುಂಜಾಗ್ರತಾ ಕ್ರಮವಾಗಿ ತೀವ್ರ ನಿಗಾವಹಿಸಲಾಗಿದೆ.
ದೆಹಲಿಯ ಅವರ ನಿವಾಸದಲ್ಲಿಯೇ ಸ್ವಯಂಪ್ರೇರಿತವಾಗಿ ದಿಗ್ಬಂಧನ ವಿಧಿಸಿಕೊಂಡಿರುವ ಅವರು, ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಕೊರೊನಾ ವೈರಸ್ ಸೋಂಕಿನ ಶಂಕೆ ಹಿನ್ನಲಯಲ್ಲಿ ಗೃಹ ಬಂಧನದಲ್ಲಿರುವ ಅವರು, ಸೋಂಕಿನ ಶಂಕೆಯ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಬಗ್ಗೆ ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಬೇಕಿದೆ.
2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ
2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...








