ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಆರ್ಭಟ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 5,242 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 157 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 3,029 ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ 36,824 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಬರೋಬ್ಬರಿ 33,053 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, 1,198 ಮಂದಿ ಸಾವನ್ನಪ್ಪಿದ್ದಾರೆ.ಗುಜರಾತ್ ರಾಜ್ಯದಲ್ಲಿ 11,379, ತಮಿಳುನಾಡು 11,224, ದೆಹಲಿಯಲ್ಲಿ 10,054 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.








