ನವದೆಹಲಿ: ದೇಶದಲ್ಲಿ ಲಾಕ್ ಡೌನ್ ಹೊರತಾಗಿಯೂ ಕೋವಿಡ್ 19 ಸೋಂಕಿತರ ಸಂಖ್ಯೆ 1117ಕ್ಕೆ ಏರಿದ್ದು, ಕೊರೊನಾ ವೈರಸ್ ಸೋಂಕಿನಿಂದ ಈವರೆಗೆ 33 ಜನರು ಮೃತಪಟ್ಟಿದ್ದಾರೆ. ನಿನ್ನೆ ಕೇರಳದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಕೇರಳದಲ್ಲಿ ಒಟ್ಟಾರೆ ಇಬ್ಬರು ಬಲಿಯಾಗಿದ್ದಾರೆ. ಇಲ್ಲಿಯವರೆಗೂ 102 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉಳಿದಂತೆ ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಚೀನಾದಲ್ಲಿ ಕಾಣಿಸಿಕೊಂಡ ಕೊರೊನಾ ಸೋಂಕು ಇದುವರೆಗೂ 200ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದು, 7 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 35 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...








