ನವದೆಹಲಿ : ಭಾರತದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಒಂದೇ ದಿನದಲ್ಲಿ ದಾಖಲೆಯ ಪ್ರಮಾಣದಲ್ಲಿ ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 32,695 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,70,169ಕ್ಕೆ ತಲುಪಿದೆ. ಇದೇ ವೇಳೆ 606 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 24,915ಕ್ಕೆ ತಲುಪಿದೆ.
ಒಟ್ಟು 9,70,169 ಮಂದಿ ಸೋಂಕಿತರ ಪೈಕಿ ಇದುವರೆಗೂ 6,12,815 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ ಇನ್ನೂ 3,31,146 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.







