ಹಲವು ಮುನ್ನೆರಿಕಾ ಕ್ರಮಗಳ ಹೊರತಾಗಿಯೂ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸದ್ಯದ ಮಾಹಿತಿ ಪ್ರಕಾರ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ 500ರ ಗಡಿ ದಾಟಿದೆ. ವರ್ಲ್ಡೋಮೀಟರ್ ಡಾಟ್ ಇನ್ಫೋದ ಪ್ರಕಾರ ಭಾರತದಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ ಐನೂರಕ್ಕೇರಿದೆ. ಮಹಾರಾಷ್ಟ್ರದಲ್ಲಿ ಇದುವರೆಗೂ 84 ಪ್ರಕರಣಗಳು ಕಂಡುಬಂದಿದ್ದರೆ, ಅತ್ತ ಕೇರಳದಲ್ಲಿ 87 ಪ್ರಕರಣಗಳು ದಾಖಲಾಗಿದೆ. ಈ ಎರಡು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ 100 ರ ಗಡಿದಾಟುವ ಆತಂಕ ಮನೆ ಮಾಡಿದೆ.
ಇನ್ನು ಕರ್ನಾಟಕದ ವಿಚಾರಕ್ಕೆ ಬಂದ್ರೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿಯ ಪ್ರಕಾರ ನಿನ್ನೆ ರಾಜ್ಯದಲ್ಲಿ ಒಟ್ಟು 33 ಪ್ರಕರಣಗಳು ದಾಖಲಾಗಿದ್ದವು. ಆದರೆ, ಇವತ್ತು ಈ ಸಂಖ್ಯೆ 37 ಕ್ಕೇರಿದೆ. ಕಳೆದ ಒಂದು ದಿನದ ಅವಧಿಯಲ್ಲೇ ರಾಜ್ಯದಲ್ಲಿ 4 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.








