ಬೆಂಗಳೂರು: ಚಳಿಗಾಲ ಪ್ರಾರಂಭವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೊನಾ 2ನೇ ಅಲೆ ಪ್ರಾರಂಭವಾಗುವ ಆತಂಕ ಇತ್ತು. ಆದರೆ, ಚಳಿಗಾಲವಿದ್ದರೂ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ಕೂಡ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಶಾಲೆಗಳನ್ನು ಆರಂಭಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಉನ್ನತಮಟ್ಟದ ಸಭೆಯ ನಂತರ ಮಾಡಿದ ಸುಧಾಕರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಮೇರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಲಾಗಿತ್ತು. ಅದೇ ಮಾರ್ಗಸೂಚಿ ಆಧಾರದ ಮೇಲೆ ಶಾಲೆ-ಪಿಯುಸಿ ತರಗತಿ ಆರಂಭ ಮಾಡುತ್ತಿದ್ದೇವೆ. ತಾಂತ್ರಿಕ ಸಲಹಾ ಸಮಿತಿಯ ವರದಿ ನಮ್ಮ ಬಳಿ ಇದೆ. ಸಿರೊ ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ.
ಚಳಿಗಾಲದಲ್ಲಿ ಕೋವಿಡ್ ಹೆಚ್ಚು ಆಗಬೇಕಿತ್ತು. ಆದರೆ ಕರ್ನಾಟಕದಲ್ಲಿ ಕಡಿಮೆ ಇದೆ, ಸರ್ಕಾರದ ನಡೆ, ನಾಗರಿಕರ ನಡೆ ಉತ್ತಮವಾಗಿದೆ. ಆದ್ದರಿಂದ ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಆಗಿದೆ. ಲಸಿಕೆ ಬಂದಾಗ ಯಾರಿಗೆಲ್ಲಾ ಮೊದಲು ಕೊಡಬಹುದು ಎಂದು ತೀರ್ಮಾನ ಮಾಡುತ್ತೇವೆ ಎಂದರು.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ 8 ತಿಂಗಳಿನಿಂದ ಮುಚ್ಚಲಾಗಿರುವ ಶಾಲೆಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಸುರಕ್ಷತೆ ಎರಡನ್ನೂ ಗಮನದಲ್ಲಿಟ್ಟುಕೊಂಡು, ತಜ್ಞರ ಅಭಿಪ್ರಾಯ ಪರಿಗಣಿಸಿ ಕೆಲ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
2021ರ ಜನವರಿ 1 ರಿಂದ ರಾಜ್ಯದಲ್ಲಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ನಿರ್ಧರಿಸಲಾಗಿದ್ದು, 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಇತರ ತರಗತಿಗಳನ್ನು ಪ್ರಾರಂಭಿಸುವ ಕುರಿತು ನಿರ್ಣಯಿಸಲಾಗುವುದು.
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಮಕ್ಕಳು ಶಾಲೆಗೆ ಮತ್ತು ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್-19 ಸೋಂಕಿನ ಲಕ್ಷಣ ಇಲ್ಲದಿರುವ ಕುರಿತು ದೃಢೀಕರಣ ನೀಡಬೇಕಿದೆ.
ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು, ಪ್ರವೇಶ ಪಡೆಯುವ 72 ಗಂಟೆಗಳ ಅಂತರದಲ್ಲಿ ಕೋವಿಡ್-19 ಪರೀಕ್ಷೆ ಮಾಡಿಸಿ, ಸೋಂಕು ಇಲ್ಲದಿರುವ ಬಗ್ಗೆ ವರದಿ ಸಲ್ಲಿಸಬೇಕು. ಶಾಲೆ-ಕಾಲೇಜಿಗೆ ಹಾಜರಾತಿ ಕಡ್ಡಾಯವಾಗಿರುವುದಿಲ್ಲ ಮತ್ತು ಮನೆಯಿಂದಲೇ ಯುಟ್ಯೂಬ್ ಮತ್ತು ಇತರ ಆನ್ಲೈ ನ್ ಮಾಧ್ಯಮಗಳಿಂದ ಅಭ್ಯಾಸ ಮಾಡಬಹುದು.
ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ ಇರಲಿದ್ದು, ವಿದ್ಯಾಗಮ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ವಾರಕ್ಕೆ ಎರಡು ಬಾರಿ ಶಾಲೆಗೆ ಹಾಜರಾಗಬೇಕು. ಭೌತಿಕ ಅಂತರ ಕಾಪಾಡಲು ಒಂದು ಕೊಠಡಿಯಲ್ಲಿ ಗರಿಷ್ಠ 15 ವಿದ್ಯಾರ್ಥಿಗಳಿರುವಂತೆ ವ್ಯವಸ್ಥೆ ರೂಪಿಸಲಾಗುವುದು. ಸುರಕ್ಷತೆ ದೃಷ್ಟಿಯಿಂದ ಬಿಸಿಯೂಟ ವಿತರಣೆ ಸದ್ಯಕ್ಕೆ ಆರಂಭವಾಗುವುದಿಲ್ಲ.
ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಸಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿಬೇಕೆಂದು ಶಾಲೆ-ಕಾಲೇಜುಗಳ ಆಡಳಿತ ಮಂಡಳಿಯವರಿಗೆ, ಪೋಷಕರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿ ಮಿತ್ರರಿಗೆ ಮನವಿ ಮಾಡುತ್ತೇನೆ ಎಂದು ಸಚಿವ ಸುಧಾಕರ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel