ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಗೆ ಕೊರೋನಾ ಸೋಂಕು
ಚಂಡೀಗಢ, ಅಗಸ್ಟ್24: ಸೋಂಕಿಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಸೋಮವಾರ ಕೋವಿಡ್ -19 ಸೋಂಕು ದೃಢಪಟ್ಟಿದೆ.
ಕಳೆದ ವಾರ ತನ್ನ ಸಂಪರ್ಕಕ್ಕೆ ಬಂದ ತನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಸಹವರ್ತಿಗಳನ್ನು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಿಎಂ ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ. ನನಗೆ ಇಂದು ಕೊರೋನಾ ವೈರಸ್ ಪರೀಕ್ಷೆಗೆ ಒಳಗಾದೆ. ನನ್ನ ಪರೀಕ್ಷಾ ವರದಿಯಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ವಾರ ನನ್ನ ಸಂಪರ್ಕಕ್ಕೆ ಬಂದ ಎಲ್ಲ ಸಹೋದ್ಯೋಗಿಗಳು ಮತ್ತು ಸಹವರ್ತಿಗಳಿಗೆ ತಮ್ಮನ್ನು ಪರೀಕ್ಷೆಗೆ ಒಳಪಡಿಸುವಂತೆ ನಾನು ಮನವಿ ಮಾಡುತ್ತೇನೆ. ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ರಾಜ್ಯ ವಿಧಾನಸಭಾ ಸ್ಪೀಕರ್ ಜಿಯಾನ್ ಚಂದ್ ಗುಪ್ತಾ ಮತ್ತು ಇಬ್ಬರು ಬಿಜೆಪಿ ಶಾಸಕರಿಗೆ ಸಹ ಸೋಮವಾರ ಕೊರೋನವೈರಸ್ ಸೋಂಕು ದೃಢಪಟ್ಟಿದೆ. ಅಸೆಂಬ್ಲಿ ಸ್ಪೀಕರ್ ಮತ್ತು ಶಾಸಕರಾದ ಅಸೀಮ್ ಗೋಯೆಲ್ ಮತ್ತು ರಾಮ್ ಕುಮಾರ್ ಅವರಿಗೂ ಕೊರೋನವೈರಸ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ