ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ತನ್ನ ಕಬಂದಬಾಹುಗಳನ್ನು ಚಾಚುತ್ತಲೇ ಇದೆ. ಹಲವಾರು ಕಠಿಣ ಮುನ್ನೆಚ್ಚರಿಕೆ ಕ್ರಮಗಳ ಹೊರತಾಗಿಯೂ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗುತ್ತಲೇ ಇದ್ದು, ಇಂದು 200ರ ಗಡಿದಾಟಿದೆ. ಅಲ್ಲದೆ ಕಿಲ್ಲರ್ ಕೊರೊನಾ ದೇಶದಲ್ಲಿ ಐವರನ್ನು ಬಲಿ ತೆಗೆದುಕೊಂಡಿದೆ. ಇದರ ಮಧ್ಯೆ ಸೋಂಕು ದೃಢಪಟ್ಟವರ ಪೈಕಿ ಕೆಲವರ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ.!
ಆತಂಕಕಾರಿ ಸಂಗತಿ ಎಂದ್ರೆ ಕೊರೊನಾ ಬಾಧಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಇದು ಮತ್ತಷ್ಟು ಏರಿಕೆಯಾಗುವ ಭೀತಿ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.








