ಹೊಸದಿಲ್ಲಿ, ಜೂನ್ 6 : ಜಾರಿ ನಿರ್ದೇಶನಾಲಯ (ಇಡಿ) ಪ್ರಧಾನ ಕಚೇರಿಯ 6 ಜನ ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದೆಹಲಿಯ ಲೋಕನಾಯಕ್ ಭವನದಲ್ಲಿರುವ ಜಾರಿ ನಿರ್ದೇಶನಾಲಯ ಪ್ರಧಾನ ಕಚೇರಿಯ 6 ಜನ ಅಧಿಕಾರಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಕಚೇರಿ ಮತ್ತು ಕಚೇರಿ ಇರುವ ಪ್ರದೇಶವನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.
ಇತರ ಸಿಬ್ಬಂದಿಗಳನ್ನು ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈಗಾಗಲೇ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಯನ್ನು ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಅಲ್ಲದೇ ಕೊರೊನಾ ಸೋಂಕು ದೃಢಪಟ್ಟ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಇಲಾಖೆಯ 10ಕ್ಕೂ ಹೆಚ್ಚು ಸಿಬ್ಬಂದಿಗಳನ್ನು, ಕುಟುಂಬದವರನ್ನು, ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಐಡಿ ಕಛೇರಿ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಪ್ರಧಾನ ಕಚೇರಿಯನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ಸ್ಯಾನಿಟೈಸ್ ಕಾರ್ಯ ನಡೆಯುತ್ತಿದೆ.