ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸ್ಫೋಟ ಮುಂದುವರಿದಿದ್ದು, ಇದೀಗ ಒಟ್ಟು ಸೋಂಕಿತರ ಸಂಖ್ಯೆ 33,10,234ಕ್ಕೆ ಬಂದು ನಿಂತಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 75,759 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿವೆ. 1023 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 33,10,234ಕ್ಕೆ ಒಟ್ಟು ಮೃತಪಟ್ಟಿರುವವರ ಸಂಖ್ಯೆ 60,472ಕ್ಕೆ ಏರಿಕೆ ಆಗಿದೆ.
ಇನ್ನು ದೇಶದ ಒಟ್ಟು 33,10,234 ಸೋಂಕಿತರ ಪೈಕಿ 25,23,771 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನುಳಿದಂತೆ 7,25,991 ಸಕ್ರಿಯ ಕೇಸ್ ಗಳು ದೇಶದಲ್ಲಿವೆ.