ರಾಜ್ಯದಲ್ಲಿ ಒಟ್ಟು ಸೋಂಕಿತರ( Coronavirus ) ಸಂಖ್ಯೆ 9,71,647ಕ್ಕೆ ಏರಿಕೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿನ್ನೆ 1,445 ಮಂದಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸೋಮವಾರ 1,445 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,71,647ಕ್ಕೆ ಒಟ್ಟು ಮೃತಪಟ್ಟವರ ಸಂಖ್ಯೆ 13,444ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 9,44,917 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 14,267 ಸಕ್ರಿಯ ಪ್ರಕರಣಗಳಿದ್ದು, ಐಸಿಯುನಲ್ಲಿ 136 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ 886, ಉಡುಪಿ 113, ಮೈಸೂರು 61, ತುಮಕೂರು 51, ಬೀದರ್ 51, ಕಲಬುರಗಿ 43 ಮಂದಿಗೆ ಸೋಂಕಿರುವುದು ದೃಢವಾಗಿದೆ.