ನವದೆಹಲಿ : ದೇಶದ್ಯಾಂತ ಮಹಾಮಾರಿ ಕೊರೊನಾ ವೈರಸ್ ಸೋಂಕು ಆತಂಕ ತಂದೊಡ್ಡಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಠಿಣ ಮುಂಜಾಗ್ರತಾ ಕ್ರಮಗಳ ಹೊರತಾಗಿಯೂ ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1543 ಮಂದಿಯಲ್ಲಿ ಹೊಸದಾಗಿ ಮಾರಕ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1543 ಮಂದಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದ್ದು, 62 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ ಒಟ್ಟಾರೆ ಸೋಂಕು ಪೀಡಿತರ ಸಂಖ್ಯೆ 29,435ಕ್ಕೆ ಏರಿಕೆಯಾಗಿದ್ದು, ಈ ಪೈಕಿ 21,632 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 6868 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ದೇಶದಲ್ಲಿ ಈವರೆಗೆ ಕಿಲ್ಲರ್ ಕೊರೊನಾಗೆ 934 ಮಂದಿ ಬಲಿಯಾಗಿದ್ದಾರೆ..