ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 20 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬಾಗಲಕೋಟೆಯಲ್ಲಿ ಬರೋಬ್ಬರಿ 13 ಕೇಸ್ ಗಳು, ಬೆಂಗಳೂರಿನಲ್ಲಿ 2, ದಕ್ಷಿಣ ಕನ್ನಡದಲ್ಲಿ 3, ಹಾಗೂ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಇಂದು 23 ಜನರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು 354 ಜನರು ಕೊರೊನಾ ಸೋಂಕು ಮುಕ್ತವಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕಿನ ಕಾರಣದಿಂದಾಗಿ ಒಟ್ಟು 29 ಜನರು ಸಾವನ್ನಪ್ಪಿದ್ದರೆ, ಆತ್ಮಹತ್ಯೆ ಮಾಡಿಕೊಂಡ ಒಬ್ಬ ಸೋಂಕಿತನೂ ಸೇರಿ ಒಟ್ಟು 30 ಸೋಂಕಿತರು ಸಾವನ್ನಪ್ಪಿದಂತಾಗಿದೆ.
ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್ ಪತ್ತೆ
ಬಾಗಲಕೋಟೆ-13
ಬೆಂಗಳೂರು ನಗರ-02
ದಕ್ಷಿಣಕನ್ನಡ -03
ಕಲಬುರಗಿ -01
ವಿಜಯಪುರ-01








