ನವದೆಹಲಿ : ಭಾರತದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ಸಿಕ್ಕ ಸಿಕ್ಕವರ ದೇಹಹೊಕ್ಕಿ ಮರಣ ಮೃದಂಗ ಬಾರಿಸುತ್ತ ಸಾಗಿದೆ.
ಹಲವು ಮುನ್ನೆಚ್ಚರಿಕಾ ಕ್ರಮಗಳ ಹೊರತಾಗಿಯೂ ಇದೀಗ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 62 ಲಕ್ಷದ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 80,472 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, 1,179 ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 62,25,764ಕ್ಕೆ, ಹೆಮ್ಮಾರಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 97,497ಕ್ಕೆ ತಲುಪಿದೆ.
ಇದನ್ನೂ ಓದಿ : ನೇಪಾಳದಲ್ಲಿ ಚೀನಾ ವಿರುದ್ಧ ತೀವ್ರಗೊಂಡ ಪ್ರತಿಭಟನೆ
ಇನ್ನು ದೇಶದ ಒಟ್ಟು 62,25,764 ಸೋಂಕಿತರ ಪೈಕಿ 51,87,826 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನುಳಿದಂತೆ 9,40,441 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ.
ದೇಶದಲ್ಲಿ ನಿನ್ನೆ ಒಂದೇ ದಿನ 10,86,688 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 7,41,96,729 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ.








