ರಾಜ್ಯದಲ್ಲಿ ದಿನಕ್ಕೆ 1 ಲಕ್ಷ ಕೊರೊನಾ ಕೇಸ್ ಸಾಧ್ಯತೆ..
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮತ್ತೆ ಶುರುವಾಗಿದೆ. ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಕೊರೊನಾ ಕೇಸ್ ಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಹೀಗಾಗಿಯೇ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಹಾಫ್ ಲಾಕ್ ಡೌನ್ ಮತ್ತು ವೀಕೆಂಡ್ ಲಾಕ್ ಡೌನ್ ಜಾರಿಗೆ ಸರ್ಕಾರ ಮುಂದಾಗಿದೆ. ಆ ಮೂಲಕ ಕೊರೊನಾಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.
ಈ ಮಧ್ಯೆ ಫೆಬ್ರವರಿ ವೇಳೆಗೆ ರಾಜ್ಯದಲ್ಲಿ ದಿನ ಒಂದಕ್ಕೆ ಎಂಬತ್ತು ಸಾವಿರದಿಂದ ಒಂದು ಲಕ್ಷ ಕೊರೊನಾ ಕೇಸ್ ಗಳು ಪತ್ತೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.
ರಾಜ್ಯದಲ್ಲಿ ಕೊರೊನಾ ಸ್ಫೋಟವು ಸದ್ಯದ ಪ್ರರಿಸ್ಥಿತಿಯಂತೇ ಮುಂದುವರೆದರೇ ಫೆಬ್ರವರಿ ವೇಳೆಗೆ ರಾಜ್ಯದಲ್ಲಿ ಪ್ರತಿ ದಿನ 80 ಸಾವಿರಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ಭಾರತೀಯ ವಿಜ್ಞಾನ ಸಂಸ್ಥೆಯೂ ಮೂರು ರೀತಿಯಲ್ಲಿ ಕೊರೊನಾ ಸ್ಫೋಟದ ಬಗ್ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಯಾವುದೇ ಮುನ್ನಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದಲ್ಲಿ ಫೆಬ್ರವರಿಗೆ ಕೊರೊನಾ ಮಹಾ ಸ್ಫೋಟವಾಗಿದೆ.
ಒಂದು ವೇಳೆ ಲಾಕ್ ಡೌನ್ ನಂತಹ ಕಠಿಣ ಕ್ರಮಗಳನ್ನು ತೆಗೆದುಕೊಂಡಲ್ಲಿ ಫೆಬ್ರವರಿ ವೇಳೆಗೆ ದಿನ ಒಂದಕ್ಕೆ 40 ರಿಂದ 50 ರವರೆಗೂ ಕೇಸ್ ಗಳು ಪತ್ತೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಇದಲ್ಲದೇ ಮಾರ್ಚ್ ಅಂತ್ಯದ ವೇಳೆಗೆ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ ತಿಳಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.









