ಬೆಂಗಳೂರು ಮಹಾಮಾರಿ ಕೊರೊನಾಗೆ ಹೆದರಿ ಮಹಿಳಾ ರೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.
ಕೆ.ಸಿ ಜನರಲ್ ಆಸ್ಪತ್ರೆಯ ಕೊರೊನಾ ವಾರ್ಡ್ನಲ್ಲೇ ಸೀರೆಯಿಂದ ನೇಣು ಹಾಕಿಕೊಂಡು 60 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಣಿಗಲ್ ಮೂಲದ ಈ ಮಹಿಳೆ ರಾಜಗೋಪಾಲನಗರದಲ್ಲಿ ವಾಸವಾಗಿದ್ದರು. ಇದೇ ತಿಂಗಳ 18ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದರು. ತಡರಾತ್ರಿ 2.30ಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಕೊರೋನಾ ಸೋಂಕಿತ ಮಹಿಳೆಯ ಮಗ, ಸೊಸೆ ಹಾಗೂ ಮೊಮ್ಮಗನಿಗೆ ಸೋಂಕು ಕಾಣಿಸಿಕೊಂಡು ಆಸ್ಪತ್ರೆ ಸೇರಿದ್ದರು. ಇದೇ ಕಾರಣದಿಂದ ಖಿನ್ನತೆಯಿಂದ ಅಥವಾ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕಳೆದ 2 ತಿಂಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಕೊರೋನಾ ರೋಗಿ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದ. ಕೆಎಸ್ಆರ್ಪಿ ಪೇದೆಯೊಬ್ಬರು ಆಸ್ಪತ್ರೆಗೆ ದಾಖಲಿಸಲು ಕರೆತರುತ್ತಿದ್ದ ವೇಳೆ ಪೊಲೀಸ್ ಬಸ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು.
ಶೈಕ್ಷಣಿಕ ಪ್ರವಾಸ ರದ್ದು: ಶಿಕ್ಷಣ ಇಲಾಖೆ ಸ್ಪಷ್ಟನೆ
ಶಿಕ್ಷಣ ಇಲಾಖೆ 2024-25ನೇ ಸಾಲಿನ ಶೈಕ್ಷಣಿಕ ಪ್ರವಾಸಗಳನ್ನು ರದ್ದು ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಈಗಾಗಲೇ ಪ್ರವಾಸಕ್ಕೆ ತೆರಳಿರುವ ವಿದ್ಯಾರ್ಥಿಗಳನ್ನು ವಾಪಸು ಬರುವಂತೆ ಸೂಚಿಸಿಲ್ಲ ಎಂದು ಕೂಡ ತಿಳಿಸಿದೆ....