ಪ್ರಧಾನ ಮಂತ್ರಿ ನರೇಂದ್ರ ಏಪ್ರಿಲ್ 5 ರಂದು ರಾತ್ರಿ 9ಗಂಟೆಗೆ 9 ನಿಮಿಷಗಳ ಕಾಲ ಮನೆಯ ಮುಂದೆ ಅಥಾವ ಬಾಲ್ಕನಿಯಲ್ಲಿ ನಿಂತು ದೀಪ ಬೆಳಗಿಸಿ ಎಂದು ಕರೆ ನೀಡಿದ್ದರು. ಮೇಣದ ಬತ್ತಿ, ಮೊಬೈಲ್ ಲೈಟ್, ದೀಪ ಬೆಳಗಿಸಿ ಎಂದು ಕರೆ ನೀಡಿದ್ದರು. ಇದೀಗ ಈ ಕರೆಗೆ ದೇಶದಾದ್ಯಂತ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಮೋದಿ ಅವರ ವಿರುದ್ದ ಕಿಡಿಕಾರಿದ್ದಾರೆ. ಮನೆಯಲ್ಲಿ ಕ್ಯಾಂಡಲ್ ಲೈಟ್ ಅಥವಾ ಮೊಬೈಲ್ ಟಾರ್ಚ್ ಬೆಳಗಿಸುವುದರಿಂದ ಕೊರೊನಾ ಸಮಸ್ಯೆ ಬಗೆಹರಿಸಲು ಆಗುವುದಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಬೇರೆ ದೇಶಗಳಿಗೆ ಹೋಲಿಸಿದಾಗ ಭಾರತದಲ್ಲಿ ಹೆಚ್ಚು ಕೊರೊನಾ ಟೆಸ್ಟ್ ನಡೆಯುತ್ತಿಲ್ಲ. ಚಪ್ಪಾಳೆ ಹೊಡೆದರೆ, ಆಕಾಶಕ್ಕೆ ಟಾರ್ಚ್ ಬಿಟ್ಟರೆ ದೇಶದಲ್ಲಿ ಈ ಕೊರೊನಾ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








