ಹೊಸದಿಲ್ಲಿ, ಮೇ 28 : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಜೋರಾಗಿದ್ದು, ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇದೀಗ ಬಿಜೆಪಿ ಪಕ್ಷದ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಅವರಲ್ಲಿ ಕೊರೋನಾ ವೈರಸ್ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರದಂದು ಗುರುಗಾಂವ್ ನ ಖಾಸಗಿ ಆಸ್ಪತ್ರೆ ಮೆದಾಂತ ಹಾಸ್ಪಿಟಲ್ ಗೆ ಸಂಭೀತ್ ಪಾತ್ರಾ ಅವರು ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ವೈದ್ಯರು ಸಂಭೀತ್ ಪಾತ್ರಾ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದು, ಅವರಿಗೆ ಕೊರೊನ ವೈರಸ್ ಸೋಂಕು ತಗುಲಿರುವ ಬಗ್ಗೆ ಇನ್ನೂ ದೃಢಪಟ್ಟಿಲ್ಲ. ಬಿಜೆಪಿಯ ಪ್ರಮುಖ ವಕ್ತಾರರಾಗಿರುವ ಸಂಬೀರ್ ಪಾತ್ರಾ, ತಮ್ಮ ಖಡಕ್ ಮಾತುಗಳಿಂದ ವಿರೋಧ ಪಕ್ಷಗಳ ಬಾಯಿ ಮುಚ್ಚಿಸುವುದರಲ್ಲಿ ಮತ್ತು ಮಾಧ್ಯಮಗಳಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ನಿಲುವುಗಳನ್ನು ಪ್ರಚುರಪಡಿಸುವಲ್ಲಿ ಖ್ಯಾತಿ ಗಳಿಸಿದ್ದಾರೆ.








