ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಗೆ ಕೊರೊನಾ ಸೋಂಕು
ಭೋಪಾಲ್, ಜುಲೈ 25: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಚೌಹಾನ್ ಟ್ವೀಟ್ ಮಾಡುವ ಮೂಲಕ ತಮ್ಮ ಪರೀಕ್ಷೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಮತ್ತು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಜ್ಯದ ಕೋವಿಡ್-19 ಪರಿಸ್ಥಿತಿಯ ಪರಿಶೀಲನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.
ನಾನು ಕೊರೊನಾ ಸೋಂಕಿನ ರೋಗಲಕ್ಷಣಗಳನ್ನು ಹೊಂದಿದ್ದ ಕಾರಣ ಕೋವಿಡ್ ಪರೀಕ್ಷೆಗೆ ಒಳಗಾದೆ. ಪರೀಕ್ಷೆಯ ನಂತರ ನನ್ನ ವರದಿ ಸಕಾರಾತ್ಮಕವಾಗಿ ಬಂದಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಾನು ನನ್ನ ಎಲ್ಲ ಸಹೋದ್ಯೋಗಿಗಳಿಗೆ ಮನವಿ ಮಾಡುತ್ತೇನೆ ಎಂದು ಚೌಹಾನ್ ಟ್ವೀಟ್ ಮಾಡಿದ್ದಾರೆ. ಜೊತೆಗೆ ನನ್ನ ನಿಕಟ ಸಂಪರ್ಕ ಹೊಂದಿದವರು ಕ್ವಾರೆಂಟೈನ್ ಗೆ ಒಳಗಾಗಿ ಎಂದು ಕೋರಿದ್ದಾರೆ.

ನನ್ನ ಪ್ರಿಯ ದೇಶವಾಸಿಗಳೇ, ನಾನು ಕೋವಿಡ್ ನ ಲಕ್ಷಣಗಳನ್ನು ಹೊಂದಿದ್ದು, ಪರೀಕ್ಷೆಯ ನಂತರ ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನನ್ನ ಎಲ್ಲ ಸಹೋದ್ಯೋಗಿಗಳಿಗೆ ಮತ್ತು ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆಯನ್ನು ಮಾಡಬೇಕೆಂದು ನಾನು ಮನವಿ ಮಾಡುತ್ತೇನೆ. ನನ್ನ ನಿಕಟ ಸಂಪರ್ಕ ಹೊಂದಿದವರು ಕ್ವಾರೆಂಟೈನ್ ಗೆ ಒಳಗಾಗಿ ಎಂದು ಅವರು ಮನವಿ ಮಾಡಿದ್ದಾರೆ.








