ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದೆ.
ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಪ್ರಮಾಣ ಶೇ.6.3ರಿಂದ ಶೇ.8.9ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 88,600 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು,
ರಾಕ್ಷಸಿ ಕೊರೊನಾ 1,124 ಸೋಂಕಿತರನ್ನು ಬಲಿ ಪಡೆದುಕೊಂಡಿದೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ಕೊರೊನಾ ದೃಢ
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 59,92,533ಕ್ಕೆ ಸೋಂಕಿಗೆ ಮೃತಪಟ್ಟವರ ಸಂಖ್ಯೆ 94,503ಕ್ಕೆ ಏರಿಕೆ ಆಗಿದೆ.
ಇನ್ನು ಒಟ್ಟು 59,92,533 ಸೋಂಕಿತರ ಪೈಕಿ 49,41,628 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಳಿದಂತೆ 9,56,402 ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.








