ನವದೆಹಲಿ : ( Coronavirus Update )ದೇಶದಲ್ಲಿ ಕೊರೊನಾ ಕೇಸ್ ಗಳ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ತಗ್ಗುತ್ತಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ 24 ಗಂಟೆಗಳಲ್ಲಿ 73,272 ಕೊರೊನಾ (Coronavirus ) ಪ್ರಕರಣಗಳು ಪತ್ತೆಯಾಗಿದ್ದು, 24 ಗಂಟೆಗಳಲ್ಲಿ 926 ಜನ ಕೊರೊನಾಗೆ ಬಲಿಯಾಗಿದ್ದಾರೆ.
ಈ ಮೂಲಕ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 69,79,424ಕ್ಕೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,07,416ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ : ಪಾಪಿ ಪಾಕ್ ಗೆ ಯುದ್ಧ ವಿಮಾನಗಳ ರಹಸ್ಯ ಮಾಹಿತಿ ಒದಗಿಸುತ್ತಿದ್ದ ಎಚ್ಎಎಲ್ ಉದ್ಯೋಗಿ ಬಂಧನ
ದೇಶದ ಒಟ್ಟು 69,79,424 ಕೊರೊನಾ ಪ್ರಕರಣಗಳ ಪೈಕಿ, 8,83,185 ಸಕ್ರಿಯ ಪ್ರಕರಣಗಳಿವೆ. ಈವರೆಗೆ 59,88,823 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಕಳೆದ 24 ಗಂಟೆಗಳಲ್ಲಿ 11,64,018 ಜನರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 8,57,98,698 ಜನನ್ನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.