Coronavirus ಕೊರೊನಾ ರಣಕೇಕೆ : ನಿನ್ನೆ ದೇಶದಲ್ಲಿ 2,17,353 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ 2,17,353 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ಒಂದೇ ದಿನ 2,17,353 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದರೇ 1,185 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,42,91,917ಕ್ಕೆ ಸಾವಿನ ಸಂಖ್ಯೆ 1,74,308ಕ್ಕೆ ತಲುಪಿದೆ. ಈ ನಡುವೆ ಸಕ್ರಿಯ ಪ್ರಕರಣಗಳ ಸಂಖ್ಯೆ ದಾಖಲೆಯ 15,69,743ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,18,302 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,25,47,866ಕ್ಕೆ ತಲುಪಿದೆ.