ಬೆಂಗಳೂರು, ಜೂನ್ 7: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ.
ಬೆಂಗಳೂರಿನ ಅಗ್ರಹಾರ ದಾಸರಹಳ್ಳಿಯ 61 ವರ್ಷ ಪ್ರಾಯದ ವೃದ್ಧೆ ಅನಾರೋಗ್ಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆ ಸಿಬ್ಬಂದಿ ಕೊರೋನಾ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಆದರೆ ಅಷ್ಟರಲ್ಲಿ ವೃದ್ಧೆಯ ಸಂಪರ್ಕದಲ್ಲಿದ್ದ ನಾಲ್ವರಿಗೆ ಸೋಂಕು ತಗುಲಿದ್ದು, ಸೋಂಕು ದೃಢಪಟ್ಟ 8 ದಿನಗಳ ನಂತರ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವನ್ನಪ್ಪಿದ್ದಾರೆ.
ಮತ್ತೊಬ್ಬರನ್ನು ಮಹಾಲಕ್ಷ್ಮಿ ಲೇಔಟ್‍ನ ವೃದ್ಧ(65) ಎಂದು ಗುರುತಿಸಲಾಗಿದ್ದು, ಈ ಮೊದಲೇ ಮೃತಪಟ್ಟಿದ್ದ ಇವರ ಕೊರೊನಾ ಸೋಂಕಿನ ಪರೀಕ್ಷಾ ವರದಿ ಇಂದು ಬಂದಿದೆ. ವರದಿಯಲ್ಲಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ವರದಿ ಬರುವ ಮೊದಲೇ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡವರ ಮಾಹಿತಿಯನ್ನು ಕಲೆ ಹಾಕುತ್ತಿರುವ ಅಧಿಕಾರಿಗಳು ಅವರನೆಲ್ಲಾ ಕ್ವಾರಂಟೈನ್ ಗೆ ಒಳಪಡಿಸಲು ಸಿದ್ದತೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು 70 ವಾರ್ಡ್ ಗಳಿಗೆ ವ್ಯಾಪಿಸಿದೆ. ಈಗಾಗಲೇ ಕಂಟೈನ್ಮೆಂಟ್ ಝೋನ್ ಗಳು 40 ಕ್ಕೆ ಏರಿದ್ದು, ಹಸಿರು ವಲಯಗಳೆಂದು ಗುರುತಿಸಿಕೊಂಡಿದ್ದ ಹೊಸ ವಾರ್ಡ್ ಗಳಲ್ಲೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ.
ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್
ದೀಪಾವಳಿ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ನಿಲುವು ವ್ಯಕ್ತಪಡಿಸಿದೆ. ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರುವುದಿಲ್ಲ, ಆದರೆ ದಿನದ 24 ಗಂಟೆಯೂ...








