ಹಾಸನ : ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಶಿವಲಿಂಗೇಗೌಡ, ನನಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆರೋಗ್ಯವಾಗಿದ್ದೇನೆ. ನನ್ನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಂಡು ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಮನವಿ ಮಾಡಿದ್ದಾರೆ.
ನಿನ್ನೆ ಶಾಸಕ ಶಿವಲಿಂಗೇಗೌಡ ಅರಸೀಕೆರೆ ನಗರಸಭೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದರು.








