ಹೈದರಾಬಾದ್ನ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಮಹಿಳೆಯೊಬ್ಬಳು ಸಾವನ್ನಪ್ಪಿದ ಪ್ರಕರಣವು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಘಟನೆ ನಂತರ, ಸ್ಥಳೀಯ ಪೊಲೀಸರು ತಕ್ಷಣವೇ ಪ್ರಕರಣವನ್ನು ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸುವ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ವಿರುದ್ಧ IPC ಸೆಕ್ಷನ್ 105, 118(1), ಮತ್ತು BNS 3(5) ಅಡಿಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಗಳು ಸಾಮಾನ್ಯವಾಗಿ ತೊಂದರೆಗಳನ್ನು ಉಂಟುಮಾಡುವ, ಅಜಾಗರೂಕತೆ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಹಾನಿ ಮಾಡಿದ ಪ್ರಕರಣಗಳಿಗೆ ಸಂಬಂಧಿಸುತ್ತವೆ.
ಹಾಗಾಗಿ, ಕಾನೂನಿನ ಅಡಿಯಲ್ಲಿ ಈ ಪ್ರಕರಣ ಸಾಬೀತಾದರೆ, ಅಲ್ಲು ಅರ್ಜುನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ.
ಪ್ರಕರಣದ ಹಿನ್ನಲೆಯಲ್ಲಿ, ಪೊಲೀಸರು ಥಿಯೇಟರ್ ಮಾಲೀಕರನ್ನು ಕೂಡಾ ಬಂಧಿಸಿದ್ದು, ಅವರು ಸ್ಥಳದಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಆರೋಪಿತರ ನಿರ್ಲಕ್ಷ್ಯದಿಂದಲೇ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷ ಸಾಕ್ಷಿಗಳು ಮತ್ತು ಸಿಸಿಟಿವಿ ದೃಶ್ಯಗಳು ಹೇಳುತ್ತಿದೆ ಎನ್ನಲಾಗಿದೆ. ಇದು ಅಲ್ಲು ಅರ್ಜುನ್ ಅವರ ಕರಿಯರ್ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂಬ ಮಾತುಗಳು ಈಗಾಗಲೇ ಅಭಿಮಾನಿಗಳ ವಲಯದಲ್ಲಿ ಕೇಳಿಬರುತ್ತಿವೆ.