indo pak | ಇಂಡೋ – ಪಾಕ್ ಕಾಳಗಕ್ಕೆ ಕ್ಷಣಗಣನೆ
ಇಡೀ ವಿಶ್ವ ಕ್ರಿಕೆಟ್ ಜಗತ್ತು ಎದುರು ನೋಡುತ್ತಿರುವ ಇಂಡೋ – ಪಾಕ್ ಕಾಳಗಕ್ಕೆ ಕ್ಷಣಗಣನೆ ಶುರುವಾಗಿದೆ. ಆಸ್ಟ್ರೇಲಿಯಾದ ಮೆಲ್ ಬಾರ್ನ್ ನಲ್ಲಿ ಬದ್ಧವೈರಿಗಳ ಯುದ್ಧಕ್ಕೆ ವೇದಿಕೆ ಸಜ್ಜಾಗಿದೆ.
ಕಳೆದ ಟಿ 20 ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಸೋತಿದ್ದ ಟೀಂ ಇಂಡಿಯಾ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಅನ್ ಪೇಪರ್ ನಲ್ಲಿ ಟೀಂ ಇಂಡಿಯಾ ಸಾಲಿಡ್ ಸ್ಟ್ರಾಂಗ್ ಆಗಿದೆ. ಬ್ಯಾಟಿಂಗ್ ನಲ್ಲಿ ಬಲಿಷ್ಟವಾಗಿರುವ ಭಾರತ ತಂಡದ ಬೌಲಿಂಗ್ ವಿಭಾಗ ಕೊಂಚ ಸುಧಾರಿಸಬೇಕಾಗಿದೆ. ಅದರಲ್ಲೂ ವೇಗದ ಬೌಲಿಂಗ್ ವಿಭಾಗದಲ್ಲಿ ಯಾರೆಲ್ಲಾ ಕಣಕ್ಕಿಳಿಯಲಿದ್ದಾರೆ ಅನ್ನೋವ ಪ್ರಶ್ನೆ ಎದುರಾಗಿದೆ.
ಬ್ಯಾಟಿಂಗ್ ವಿಚಾರಕ್ಕೆ ಬಂದರೆ ಟೀಂ ಇಂಡಿಯಾದ ಬ್ಯಾಟಿಂಗ್ ಲೈನ್ ಅಪ್ ಈಗಾಗಲೇ ಫಿಕ್ಸ್ ಆಗಿದೆ.
ಆರಂಭಿಕರಾಗಿ ಕೆ.ಎಲ್ ರಾಹುಲ್, ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದು, ಮಿಡಲ್ ಆರ್ಡರ್ ನಲ್ಲಿ ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಆಡೋದು ಪಕ್ಕಾ.
ಇನ್ನು ವಿಕೆಟ್ ಕೀಪರ್ ಸ್ಥಾನದಲ್ಲಿ ದಿನೇಶ್ ಕಾರ್ತಿಕ್, ಸ್ಪಿನ್ ಆಲ್ ರೌಂಡರ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಸ್ಥಾನ ಪಡೆಯಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಅಶ್ವಿನ್, ಮೊಹ್ಮದ್ ಶಮಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ ಅಥವಾ ಅರ್ಷ್ ದೀಪ್ ಸಿಂಗ್ ಗೆ ಅವಕಾಶ ಸಿಗಲಿದೆ.
ಟ್ರ್ಯಾಕ್ ರೆಕಾರ್ಡ್
ಟಿ-20 ವಿಶ್ವಕಪ್‍ನ ಇತಿಹಾಸದ ಪುಟಗಳನ್ನು ಮೆಲುಕು ಹಾಕಿದ್ರೆ ಪಾಕ್ ವಿರುದ್ಧದ ಹಣಾಹಣಿಯಲ್ಲಿ ಭಾರತದ್ದೇ ಮೇಲುಗೈ. 6 ಬಾರಿ ಇಂಡೋ-ಪಾಕ್ ತಂಡಗಳು ಎದುರಾಗಿದ್ದು, ಭಾರತ 4 ಬಾರಿ ಗೆಲುವು ಸಾಧಿಸಿದ್ರೆ, ಪಾಕ್ ಪಡೆ ಕೇವಲ 1 ಪಂದ್ಯದಲ್ಲಿ ಜಯ ತನ್ನದಾಗಿಸಿದೆ. ಒಂದು ಪಂದ್ಯ ಡ್ರಾನಲ್ಲಿ ಅಂತ್ಯ ಕಂಡಿದೆ.
ಕಳೆದ ಮೂರು ಪಂದ್ಯಗಳ ವಿಚಾರಕ್ಕೆ ಬಂದರೆ
ಕಳೆದ ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ – ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಆಗ ಪಾಕಿಸ್ತಾನ ತಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು. ಏಷ್ಯಾಕಪ್ ನಲ್ಲಿ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದು, ತಲಾ ಒಂದೊಂದು ಪಂದ್ಯಗಳನ್ನು ಗೆದ್ದುಕೊಂಡಿವೆ.