RRR ಪ್ರೀ ರಿಲೀಸ್ ಈವೆಂಟ್ ಗೆ ಕ್ಷಣಗಣನೆ – ಸಿ ಎಂ, ಶಿವರಾಜ್ ಕುಮಾರ್ ಭಾಗಿ
ಈ ವರ್ಷದ ಬಹು ನಿರೀಕ್ಷಿತ ಚಿತ್ರ ‘RRR ‘ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇಂದು ನಮ್ಮ ರಾಜ್ಯದ ಚಿಕ್ಕಬಳ್ಳಾಪುರದಲ್ಲಿ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಡೆಯಲಿದ್ದು. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸುಮಾರು 100 ಎಕರೆ ಜಾಗದಲ್ಲಿ ಪ್ರೀ – ರಿಲೀಸ್ ಇವೆಂಟ್ ನಡೆಯಲಿದೆ. ಸಂಜೆ 6 ಗಂಟೆಯಿಂದ ಕಾರ್ಯಕ್ರಮ ಪ್ರಾರಂಭವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್ ಕುಮಾರ್, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಹಲವು ಸಚಿವರು ಬರಲಿದ್ದಾರೆ. ಅಷ್ಟೇ ಅಲ್ಲದೇ, ಮೆಗಸ್ಟಾರ್ ಚಿರಂಜೀವಿ, ಬಾಲಕೃಷ್ಣ ಸೇರಿದಂತೆ ಹಲವಾರು ಗಣ್ಯ ನಾಯಕರು ಹಾಜರಾಗಲಿದ್ದಾರೆ ಎನ್ನಲಾಗುತ್ತಿದೆ. ಬಾಹುಬಲಿ ಚಿತ್ರದ ನಿರ್ದೇಶನದ ಬಳಿಕ ರಾಜಮೌಳಿ ಅವರ ‘ಆರ್ ಆರ್ ಆರ್’ ಚಿತ್ರದ ಮೇಲೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಇನ್ನು ಚಿತ್ರದಲ್ಲಿ ಪಾತ್ರಧಾರಿಗಳಾಗಿರುವ ತೆಲುಗಿನ ಸೂಪರ್ ಸ್ಟಾರ್ಗಳಾದ ಜೂ ಎನ್ಟಿಆರ್ ಹಾಗೂ ರಾಮ್ ಚರಣ್, ಅಜಯ್ ದೇವಗನ್, ಆಲಿಯಾ ಭಟ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು 4 ರಿಂದ 5 ಲಕ್ಷ ಅಭಿಮಾನಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.
ಕಾರ್ಯಕ್ರಮದ ನಿರೂಪಣೆಯನ್ನು ಅನುಶ್ರೀ, ಅಕುಲ್ ಬಾಲಾಜಿ ತೆಲುಗಿನ ಖ್ಯಾತ ನಿರೂಪಕಿ ಸುಮಾ ನಡೆಸಿಕೊಡಲಿದ್ದಾರೆ








