Mysore Dasara 2022 – ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ.
ವಿದ್ಯುತ್ ದೀಪಾಲಂಕಾರದಿಂದ ಸಾಂಸ್ಕೃತಿಕ ನಗರಿ ಝಗಮಗಿಸುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ನಾಡಹಬ್ಬಕ್ಕೆ ಚಾಲನೆ ಸಿಗಲಿದೆ.
ಬೆಳಿಗ್ಗೆ 9.45 ರಿಂದ 10.5 ಕ್ಕೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಮೈಸೂರು ದಸರಾ ಉದ್ಘಾಟನೆಯಾಗಲಿದೆ.
ದಸರಾ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಅಂತಿಮ ಸಿದ್ದತೆಗಳು ನಡೆಯುತ್ತಿವೆ.
ಉದ್ಘಾಟನೆಯಲ್ಲಿ ರಾಷ್ಟ್ರಪತಿಗಳ ಜೊತೆ ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಹಾಗೂ ಸಚಿವರು ಭಾಗಿಯಾಗಲಿದ್ದಾರೆ.
ರಾಷ್ಟ್ರಪತಿಗಳ ಆಗಮನ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. Mysore Dasara







