ಕಾರಿನೊಳಗಡೆಯೇ ಪೆಟ್ರೋಲ್ ಸುರಿದುಕೊಂಡು ದಂಪತಿ ಆತ್ಮಹತ್ಯೆ..
ಕಾರಿನೊಳಗಡೆಯೇ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಈ ಘಟನೆ ಕಂಡುಬಂದಿದ್ದು ಸುಟ್ಟು ಕರಕಲಾದ ಕಾರಿನಲ್ಲಿ ಯುವ ಯುವತಿಯ ಶವ ಪತ್ತೆಯಾಗಿದೆ. ಮೃತ ಯುವಕ, ಯುವತಿಯನ್ನು ಬೆಂಗಳೂರು ಆರ್.ಟಿ.ನಗರ ಮೂಲದ ಯಶವಂತ ಯಾದವ್ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಇವರಿಬ್ಬರ ಮೇಲೆ ಮಿಸ್ಸಿಂಗ್ ಕೇಸು ದಾಖಲಾಗಿತ್ತು. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೊತ್ತಿ ಉರಿಯುತ್ತಿದ್ದ ಕಾರು ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದಾಗ ಇಬ್ಬರ ಶವ ಪತ್ತೆಯಾಗಿದೆ.
ನಿನ್ನೆ ಮಂಗಳೂರಿಗೆ ಬಂದು ಹುಸೇನ್ ಎಂಬವರಿಂದ ಈ ಜೋಡಿ ಸ್ವಿಫ್ಟ್ ಕಾರು ಬಾಡಿಗೆ ಪಡೆದಿತ್ತು. ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರೀಶೀಲನೆ ನಡೆಸಿದ್ದಾರೆ, ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.