ಮಂಡ್ಯ: ಸಾಲಬಾಧೆಯ ಹಿನ್ನೆಲೆಯಲ್ಲಿ ದಂಪತಿ ಆತ್ಮಹತ್ಯೆ(Death)ಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮಳವಳ್ಳಿ ಪಟ್ಟಣದ ಎನ್.ಇ.ಎಸ್. ಬಡಾವಣೆಯಲ್ಲಿ ನಡೆದಿದೆ. ರಾಜೇಶ್(45), ಸುಧಾ(40) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಾಲಬಾಧೆಯ ಸಂಕಟ ತಾಳಲಾರದೆ. ದಂಪತಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.