ವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ ಮಾಡಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.
ಅನೈತಿಕ ಸಂಬಂಧದ ಶಂಕೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸೋಮಲಿಂಗಪ್ಪ ಕುಂಬಾರ ಹಾಗೂ ಪಾರ್ವತಿ ತಳವಾರ ಕೊಲೆಯಾಗಿರುವ ದುರ್ದೈವಿಗಳು.
ಕೊಲೆಯಾದವರ ಮಧ್ಯೆ ಹಲವು ವರ್ಷಗಳಿಂದ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಸೋಮಲಿಂಗಪ್ಪನಿಗೆ ಮದುವೆಯಾಗಿ ಮಗ ಇದ್ದಾನೆ. ಮಹಿಳೆಗೆ ಕೂಡ ಇಬ್ಬರು ಮಕ್ಕಳಿದ್ದಾರೆ. ಆದರೂ ಇಬ್ಬರ ಮಧ್ಯೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ.
ಒಬ್ಬರ ಮನೆಗೆ ಒಬ್ಬರು ಬಂದು ಹೋಗುತ್ತಿದ್ದರು. ಇತ್ತೀಚೆಗೆ ಸೋಮಲಿಂಪ್ಪ, ಕಿಡ್ನಿ ಸ್ಟೋನ್ ಹಿನ್ನಲೆಯಲ್ಲಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಪಾರ್ವತಿಯನ್ನು ಕರೆದುಕೊಂಡು ಹೋಗಿದ್ದ. ಆದರೆ, ಮರಳಿ ಮನೆಗೆ ಬಂದಿಲ್ಲ. ಇಬ್ಬರೂ ಹೆಣವಾಗಿ ಗ್ರಾಮಸ್ಥರಿಗೆ ಪತ್ತೆಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.