ಬೆಂಗಳೂರು: ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ಕೊರಿಯರ್ ಬಾಯ್ (Courier boy) ಗೆ ಚಾಕು ಇರಿದಿರುವ ಘಟನೆ ಅಶೋಕನಗರದಲ್ಲಿ ನಡೆದಿದೆ.
ಮಹಮ್ಮದ್ ಶಫಿ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿ ಎನ್ನಲಾಗಿದೆ. ಕೊರಿಯರ್ ಬಾಯ್, ಕೊರಿಯರ್ ಮಾಡಲು ಕಳಿಸಿದ ಲೊಕೇಷನ್‍ಗೆ ಬಾರದೆ, ಲ್ಯಾಂಡ್ ಮಾರ್ಕ್ ಕೇಳಿದ್ದಕ್ಕೆ ದುಷ್ಕರ್ಮಿ ಚಾಕು ಇರಿದಿದ್ದಾನೆ ಎನ್ನಲಾಗಿದೆ. ಕೊರಿಯರ್ ಬಾಯ್‍ಗೆ ದುಷ್ಕರ್ಮಿ ಚಾಕು ಇರಿಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸಿಸಿ ಕ್ಯಾಮೆರಾದಲ್ಲಿ ದುಷ್ಕರ್ಮಿ ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಕುತ್ತಿಗೆಗೆ ಚಾಕು ಇರಿದಿರುವುದು ಕೂಡ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಕಂಡು ಅಲ್ಲಿದ್ದವರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದಾರೆ.








