ಕರೋನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ – ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಗೆ ವಾರಂಟ್
ಕೊರೊನಾ ತೀವ್ರವಾಗಿದ್ದ ಸಮಯದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸಿತ್ತು ಇದೀಗ ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸಿಟಿ ಸಿವಿಲ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಕೋರ್ಟ್ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ವಾರಂಟ್ ಜಾರಿ ಮಾಡಿದೆ.
ಈ ಬಗ್ಗೆ ನಗರದ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕೊರೊನಾ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಹೀಗಾಗಿ ಕೋರ್ಟ್ ಗೆ ಹೋಗುತ್ತಿದ್ದೇನೆ. ಆಮೇಲೆ ಮಾತನಾಡ್ತೀನಿ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕೊರೊನಾ ಪ್ರಕರಣಗಳು ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿತ್ತು. ಕೋರ್ಟ್ ಗರಂ ಆಗಿ ತಾಕೀತು ಮಾಡಿದ ಬಳಿಕ ಪಾದಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಪಾದಯಾತ್ರೆಯನ್ನು ತಡೆಯದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಚಾಟಿ ಬೀಸಿತ್ತು.