ದೆಹಲಿ: ಇಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್ ಗೆ ಕೋರ್ಟ್ ಸೂಚನೆ ನೀಡಿದೆ.
ದೆಹಲಿ ಮದ್ಯದ ಅಬಕಾರಿ ನೀತಿಯಲ್ಲಿ (Delhi liquor excise policy) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ 5 ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಅರವಿಂದ್ ಕೇಜ್ರಿವಾಲ್ ಉತ್ತರಿಸದೆ, ತನಿಖಾ ಸಂಸ್ಥೆ ಕೇಂದ್ರ ಸರ್ಕಾರ ಹೇಳಿದಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ, ಉತ್ತರಿಸಿರಲಿಲ್ಲ. ಹೀಗಾಗಿ ಸಮನ್ಸ್ಗೆ ಉತ್ತರ ನೀಡದ ಕ್ರೇಜಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಕೋರ್ಟ್ ಮೊರೆ ಹೋಗಿತ್ತು. ಸದ್ಯ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರ ಪೀಠ ಫೆ.17ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಎಪಿ, ನ್ಯಾಯಾಲಯದ ಆದೇಶದ ಕುರಿತು ಅಧ್ಯಯನ ನಡೆಸಲಾಗುತ್ತಿದೆ. ಅದಕ್ಕೆ ಅನುಗುಣವಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.