ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಘೋಷಿಸಿರುವ ನ್ಯಾಯಾಲಯ, ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.
2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಉತ್ತರ ಪ್ರದೇಶದ ರಾಮಪುರದಲ್ಲಿ ದಾಖಲಾಗಿತ್ತು. ಸಮನ್ಸ್ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಹೊರಡಿಸಿದೆ.
ಅವರಿಗೆ ನ್ಯಾಯಾಲಯದಿಂದ ಹಲವು ಬಾರಿ ಸಮನ್ಸ್ ಜಾರಿಯಾಗಿತ್ತು. ಆದರೆ, ಇದಕ್ಕೆ ಅವರು ಉತ್ತರಿಸಿಲ್ಲ. ಹೀಗಾಗಿ ಜಯಪ್ರದಾ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ. ಮಾರ್ಚ್ 6ರಂದು ಕೋರ್ಟ್ ಎದುರು ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
ಅಲ್ಲದೇ, ನ್ಯಾಯಾಲಯವು ನೇರವಾಗಿ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿತು. ಹೀಗಾಗಿ ತಂಡವನ್ನು ರಚಿಸಿ ಜಯಪ್ರದಾ ಅವರನ್ನು ಮಾರ್ಚ್ 6ರಂದು ವಿಚಾರಣೆಗೆ ಹಾಜರುಪಡಿಸುವಂತೆ ನ್ಯಾಯಾಲಯವು ಸೂಚಿಸಿದೆ.