ಕೊವ್ಯಾಕ್ಸಿನ್ ಲಸಿಕೆ ‘ಡೆಲ್ಟಾ ಪ್ಲಸ್’ ವಿರುದ್ಧವೂ ಪರಿಣಾಮಕಾರಿ – ವರದಿ ಬಿಡುಗಡೆ
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ.
ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಈ ನಡುವೆ ವಿಶ್ವಾದ್ಯಂತ ವ್ಯಾಕ್ಸಿನೇಷನ್ ಪ್ರಕ್ರಿಯೆಗೂ ಉತ್ತೇಜನ ನೀಡಲಾಗ್ತಿದೆ.. ಭಾರತದಲ್ಲಿ ಮೇಡ್ ಇನ್ ಇಂಡಿಯಾ ಲಸಿಕೆಗಳಾದ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಯನ್ನ ನೀಡಲಾಗ್ತಿದ್ದು, ಹೆಚ್ಚು ಪರಿಣಾಮಕಾರಿಯಾಗಿ ಪ್ರಬಾವ ಬೀರಲಿದೆ ಎನ್ನಲಾಗ್ತಿದೆ.. ಇದೀಗ ಕೊರೊನಾ ವೈರಸ್ ಸೋಂಕಿನ ವಿರುದ್ಧ ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಕೊವ್ಯಾಕ್ಸಿನ್ ಲಸಿಕೆಯ ಅಂತಿಮ ವಿಶ್ಲೇಷಣೆಯನ್ನು ಭಾರತ್ ಬಯೋಟೆಕ್ ಕಂಪನಿ ಪೂರ್ಣಗೊಳಿಸಿದ್ದು, ಪರಿಣಾಮಕಾರಿತ್ವದ ವಿವರ ಬಿಡುಗಡೆ ಮಾಡಿದೆ.
ಮೂರನೇ ಹಂತದ ಕ್ಲಿನಿಕಲ್ ಟ್ರಯಲ್‌ನಲ್ಲಿ ಕೋವಿಡ್ ದೃಢಪಟ್ಟ 130 ಪ್ರಕರಣಗಳನ್ನು ವಿಶ್ಲೇಷಣೆಗೆ ಒಳಪಡಿಸಲಾಗಿತ್ತು. ಸೌಮ್ಯ ಹಾಗೂ ತೀವ್ರ ರೋಗಲಕ್ಷಣದ ಕೋವಿಡ್ ಪ್ರಕರಣಗಳನ್ನು ತಡೆಯುವಲ್ಲಿ ಲಸಿಕೆಯು ಶೇ 77.8ರಷ್ಟು ಪರಿಣಾಮಕಾರಿಯಾಗಿರುವುದು ಕಂಡುಬಂದಿದೆ ಎಂದು ಭಾರತ್ ಬಯೋಟೆಕ್ ತಿಳಿಸಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
‘ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್ 3ನೇ ಅಲೆ ಗರಿಷ್ಟ ಮಟ್ಟಕ್ಕೆ ಏರಿಕೆ’