ಕೋವಿಡ್ 19 : ಕಳೆದ 24 ಗಂಟೆಗಳಲ್ಲಿ 11,850 ಕೊರೊನಾ ಪ್ರಕರಣಗಳು ಪತ್ತೆ
ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 11,850 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
555 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,44, 26,036 ಕ್ಕೆ ತಲುಪಿದೆ.
ಸೋಂಕಿನಿಂದ ಮೃತರಾದವರ ಸಂಖ್ಯೆ 4,63,245 ಕ್ಕೆ ತಲುಪಿದೆ.
ಭಾರತದಲ್ಲಿ ಚೇತರಿಕೆಯ ಪ್ರಮಾಣವು ಪ್ರಸ್ತುತ 98.26% ರಷ್ಟಿದೆ, ಇದು ಮಾರ್ಚ್ 2020 ರಿಂದ ಅತ್ಯಧಿಕವಾಗಿದೆ.
ಕಳೆದ 24 ಗಂಟೆಗಳಲ್ಲಿ 12,403 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.. ಒಟ್ಟು ಗುಣಮುಖರ ಸಂಖ್ಯೆ 3,38,26,483 ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಇನ್ನೂ ಸಕ್ರಿಯ ಪ್ರಕರಣಗಳ ಸಂಖ್ಯೆ 1,36,308 ಕ್ಕೆ ಇಳಿಕೆಯಾಗಿದೆ. ಇದು 267 ದಿನಗಳಲ್ಲಿ ಕಡಿಮೆಯಾಗಿದೆ.
ಈವರೆಗೆ 110.8 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.







