COVID-19 : 699 ಹೊಸ ಕೋವಿಡ್ ಪ್ರಕರಣಗಳು ಪತ್ತೆ ; ಸಕ್ರಿಯ ಪ್ರಕರಣಗಳ ಸಂಖ್ಯೆ 6,559….
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 699 ಹೊಸ ಕೋವಿಡ್ ಪ್ರಕರಣಗಳನ್ನ ಪತ್ತೆ ಹಚ್ಚಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6,559 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಎರಡು ಸಾವುಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ ಸಂಖ್ಯೆ 5,30,808 ಕ್ಕೆ ಏರಿಕೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಲಾದ ಮಾಹಿತಿ ಪ್ರಕಾರ ಒಡಿಶಾ ಮತ್ತು ಕೇರಳದಲ್ಲಿ ಸಾವುಗಳು ವರದಿಯಾಗಿವೆ.
ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಒಟ್ಟು 435 ಜನರು ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,59,617 ಕ್ಕೆ ತಲುಪಿದೆ. ದೇಶಾದ್ಯಂತ ಇದುವರೆಗೆ 220.65 ಕೋಟಿ ಜನರಿಗೆ ಕೋವಿಡ್ ಲಸಿಕೆಯನ್ನ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ನೀಡಲಾಗಿದೆ.
COVID-19: 699 new Covid cases detected; Number of active cases is 6,559….