COVID 19 UPDATE : ಬೆಂಗಳೂರಲ್ಲಿ 20 ಸಾವಿರ ಕೇಸ್ ಪತ್ತೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆಯ ಆರ್ಭಟ ಜೋರಾಗಿದ್ದು, ಇಂದು ನಗರದಲ್ಲಿ 20 ಸಾವಿರಕ್ಕೂ ಅಧಿಕ ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ನಿನ್ನೆ ಬೆಂಗಳೂರಿನಲ್ಲಿ 18 ಸಾವಿರ ಕೇಸ್ ಗಳು ಪತ್ತೆಯಾಗಿದ್ದು, ಇಂದು 20,121 ಕೇಸ್ ಗಳು ಪತ್ತೆಯಾಗಿವೆ.
ಇಂದು ನಗರದ ದಕ್ಷಿಣ ವಲಯದಲ್ಲಿ ಅತಿ ಕೇಸ್ ಗಳು ಪತ್ತೆಯಾಗಿವೆ. ಇಲ್ಲಿ 3,172 ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಬೊಮ್ಮನಹಳ್ಳಿ ವಲಯದಲ್ಲಿ 2,232 , ದಾಸರಹಳ್ಳಿ 493, ಬೆಂಗಳೂರು ಪೂರ್ವ 3,126 , ಮಹದೇವಪುರ 2,343,
ಆರ್ ಆರ್ನಗರ 1,528, ಪಶ್ಚಿಮ 2,454, ಯಲಹಂಕ 1,412, ಅನೇಕಲ್ 921,
ಬೆಂಗಳೂರು ಹೊರವಲಯ 1,360 ಸೇರಿ ಒಟ್ಟು 20,121 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇಂದಿನ ಪ್ರಕರಣಗಳೊಂದಿಗೆ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿದಾಟಿದೆ.