COVID 19 CASE UPDATE : ದೇಶದಲ್ಲಿಂದು 2.7 ಲಕ್ಷ ಕೊರೊನಾ ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.
ಕಳೆದ 24 ಗಂಟಗಳಲ್ಲಿ ದೇಶದಲ್ಲಿ 2,71,202 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ 314 ಮಂದಿ ಹೆಮ್ಮಾರಿ ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಮಾಹಿತಿ ನೀಡಿದೆ.
ಇದಲ್ಲದೇ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 1,38,331 ಮಂದಿ ಸೋಂಕಿತರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿ ಒಟ್ಟು 15,50,377 ಸಕ್ರಿಯ ಪ್ರಕರಣಗಳು ಇವೆ.
ಇನ್ನುಈವರೆಗೆ ದೇಶದಲ್ಲಿ ಸುಮಾರು 4,48,549 ಮಂದಿ ಕಿಲ್ಲರ್ ಕೊರೊನಾಗೆ ಪ್ರಾಣಬಿಟ್ಟಿದ್ದಾರೆ. ಇಂದು 7,743 ಒಮಿಕ್ರಾನ್ ಕೇಸ್ಗಳು ದೃಢಪಟ್ಟಿವೆ.