ಬೆಂಗಳೂರು : ರಾಜ್ಯದಲ್ಲಿ ಇಂದು 24,172 ಕೊರೊನಾ ಕೇಸ್ ಪತ್ತೆಯಾಗಿವೆ. ಇಂದು 56 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ. covid-19-case-update-in karnataka saaksha tv
ರಾಜ್ಯದಲ್ಲಿಂದು 30,869 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಸಕ್ರಿಯ ಕೇಸ್ ಗಳ ಸಂಖ್ಯೆ 2,44,331 ಕ್ಕೆ ಬಂದಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10,692 ಕೊರೊನಾ ಕೇಸ್ ಪತ್ತೆಯಾಗಿವೆ.
ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 17.11%ರಷ್ಟಾಗಿದೆ.
56 ಸಾವುಗಳ ಪೈಕಿ ಬೆಂಗಳೂರಿನಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ 1.34ಲಕ್ಷ ಕೊರೊನಾ ಕೇಸ್ ಗಳು ಸಕ್ರಿಯವಾಗಿವೆ.









