ಬೆಂಗಳೂರಲ್ಲಿ ಕೊರೊನಾ ಸ್ಫೋಟ : ಇಂದು 9 ಸಾವಿರ ಕೇಸ್ ಪತ್ತೆ covid-19 cases in bangalore today saaksha tv
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ ಮುಂದುವರೆದಿದೆ.
ನಗರದಲ್ಲಿ ಇಂದು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 9 ಸಾವಿರದ ಗಡಿದಾಟಿದೆ.
ಕಳೆದ ಕೆಲ ದಿನಗಳಿಂದ ನಗರದಲ್ಲಿ ಕೊರೊನಾ ಸೋಂಕು ಅಬ್ಬರಿಸುತ್ತಿದೆ.
ಅದರ ಮುಂದುವರೆದ ಭಾಗವಾಗಿ ಇವತ್ತು ನಗರದಲ್ಲಿ 9020 ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ ನಗರದಲ್ಲಿ ಇಬ್ಬರು ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ನಗರದಲ್ಲಿ 40 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ, ಇಂದಿನ ಪ್ರಕರಣಗಳೊಂದಿಗೆ ಬೆಂಗಳೂರಿನಲ್ಲಿ ಪಾಟಿಸಿವಿಟಿ ದರ ಶೇಕಡಾ 10 ದಾಟಿದೆ.
ಇತ್ತ ರಾಜ್ಯದಲ್ಲಿ ಇಂದು ಬರೋಬ್ಬರಿ 12 ಸಾವಿರ ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಇದೇ ಅವಧಿಯಲ್ಲಿ ನಾಲ್ಕು ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ದರ ಶೇಕಡಾ 6.33ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 901 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 49,603 ಕೇಸ್ ಗಳು ರಾಜ್ಯದಲ್ಲಿ ಸಕ್ರಿಯವಾಗಿವೆ.