covid 19 update : ಬೆಂಗಳೂರಲ್ಲಿ 9 ಸಾವಿರ, ರಾಜ್ಯದಲ್ಲಿ 11 ಸಾವಿರ ಕೇಸ್ ದೃಢ covid 19 cases in karnataka today update
ಬೆಂಗಳೂರು : ರಾಜ್ಯದಲ್ಲಿ ಇಂದೂ ಕೂಡ ಕೋವಿಡ್ 19 ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿದಾಟಿದೆ. ರಾಜ್ಯದಲ್ಲಿ ಇಂದು 11,698 ಹೊಸದಾಗಿ ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 04 ಜನರು ಕೊರೊನಾ ಸೋಂಕಿನಿಂದ ಉಸಿರು ನಿಲ್ಲಿಸಿದ್ದಾರೆ.
ಇಂದು ರಾಜ್ಯಾದ್ಯಂತ 1148 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 60,148 ಕೇಸ್ ಗಳು ಸಕ್ರಿಯವಾಗಿವೆ. ಇಂದಿನ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ 7.77% ಕ್ಕೆ ತಲುಪಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ ಮುಂದುವರೆದಿದೆ, ಇವತ್ತ ನಗರದಲ್ಲಿ 9221 ಕೇಸ್ ಗಳು ಪತ್ತೆಯಾಗಿವೆ. ಇಬ್ಬರು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಲ್ಲಿ ಇನ್ನೂ 49 ಸಾವಿರಕ್ಕೂ ಅಧಿಕ ಸಕ್ರಿಯ ಕೇಸ್ ಗಳಿವೆ.